ರಾಜ್ಯಎನ್ಆರ್ಐಗಳಿಗೆ ಮತದಾನದ ಅವಕಾಶ ಕಲ್ಪಿಸಲು ಕೋರಿ ಅರ್ಜಿ; ಪಿಐಎಲ್ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್
ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಅನಿವಾಸಿ ಭಾರತೀಯರಿಗೆ (ಎನ್ಆರ್ಐ) ಮತದಾನದ ಸೌಲಭ್ಯವನ್ನು ಒದಗಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಾಗರೋತ್ತರ ಕನ್ನಡಿಗರ ಸಂಘದ ಸಂಸ್ಥಾಪಕ ಮತ್ತು ಜಂಟಿ ಕಾರ್ಯದರ್ಶಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ.