ರಾಜ್ಯರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಳ; ಪೂರ್ಣ ಸಾಮರ್ಥ್ಯದಲ್ಲಿ ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ಕಾರ್ಯನಿರ್ವಹಣೆ
ರಾಜ್ಯದಲ್ಲಿ ವಿದ್ಯುತ್ ಬೇಡಿಕೆಯಲ್ಲಿ ತೀವ್ರ ಹೆಚ್ಚಳ ಉಂಟಾಗಿದ್ದು, ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮದ (ಎನ್ಟಿಪಿಸಿ) ಕೂಡಗಿ ಸ್ಥಾವರ ಇದೀಗ ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕದ ಏಕೈಕ ಮೆಗಾ ಥರ್ಮಲ್ ವಿದ್ಯುತ್ ಉತ್ಪಾದನಾ ಘಟಕ ಇದಾಗಿದೆ.