ಎಫ್‌ಸಿಐ

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧ: ಇನ್ನು ಮುಂದೆ 5 ಕೆಜಿ ಅಕ್ಕಿ ಹಣ ಬಂದ್?
ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಬೇಕೆಂಬ ರಾಜ್ಯ ಸರ್ಕಾರದ ಮನವಿಯನ್ನು ಕಳೆದ ವರ್ಷ ಕೇಂದ್ರ ತಿರಸ್ಕರಿಸಿತ್ತು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು. ಇದೀಗ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ನೀಡದಿರುವುದು ಎಲ್ಲಾ ರಾಜ್ಯಗಳ ಹಿತಾಸಕ್ತಿಯಿಂದ ಕೈಗೊಂಡ ನಿರ್ಧಾರ: ಎಫ್‌ಸಿಐ ಅಧಿಕಾರಿ
ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ನೀಡದಿರುವ ಕೇಂದ್ರದ ನಿರ್ಧಾರವು ಆ ರಾಜ್ಯದ ಮೇಲೆ ಕೈಗೊಂಡಿರುವ ನಿರ್ದಿಷ್ಟ ನಿಲುವಲ್ಲ. ಆದರೆ, ಎಲ್ಲಾ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಒದಗಿಸುವ ದೊಡ್ಡ ಹಿತಾಸಕ್ತಿಯಿಂದ ತೆಗೆದುಕೊಂಡ ನಿರ್ಧಾರ ಎಂದು ಭಾರತೀಯ ಆಹಾರ ನಿಗಮ (ಎಫ್‌ಸಿಐ) ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ತುಮಕೂರು: ಅಕ್ಕಿ ನಿರಾಕರಿಸಿದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಅನ್ನಭಾಗ್ಯ ಯೋಜನೆ ಜಾರಿಗೆ ಅಕ್ಕಿ ವಿತರಿಸದ ಕೇಂದ್ರ ಸರ್ಕಾರದ ವಿರುದ್ಧ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಭಾನುವಾರ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

