ದೇಶಜನವರಿ 31 ರಿಂದ ಎರಡು ದಿನ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ
ಜನವರಿ 31 ರಿಂದ ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಬ್ಯಾಂಕ್ ಒಕ್ಕೂಟಗಳು ಕರೆ ನೀಡಿವೆ. ಒಂಬತ್ತು ಕಾರ್ಮಿಕ ಸಂಘಟನೆಗಳನ್ನು ಪ್ರತಿನಿಧಿಸುವ ಯುನೈಟೆಡ್ ಪೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ ಬಿಯು) ಈ ಮುಷ್ಕರಕ್ಕೆ ಕರೆ ನೀಡಿದ್ದು, ಮಾರ್ಚ್ 11- 13 ರಿಂದ ಮೂರು ದಿನಗಳ ಕಾಲ ಮುಷ್ಕರ ನಡೆಸುವುದಾಗಿಯೂ ಹೇಳಿಕೊಂಡಿದೆ.