ರಾಜ್ಯಬೆಂಗಳೂರಿನಲ್ಲಿ ದಾಳಿಗೆ ಸಂಚು: ಉಗ್ರ ಇಮ್ರಾನ್ ಜೀವಾವಧಿ ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್
ವಿಧಾನ ಸೌಧ, ಎಚ್ಎಎಲ್, ವಿಪ್ರೋ, ಇನ್ಪೋಸಿಸ್ ಸೇರಿ ನಗರದ ಪ್ರಮುಖ ಐಟಿ ಕಂಪನಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆ ಸದಸ್ಯ ಇಮ್ರಾನ್ ಜಲಾಲ್ಗೆ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.