ರಾಜಕೀಯ'ಪಕ್ಷದಲ್ಲಿ ಯಾವುದೇ ಕಿತ್ತಾಟವಿಲ್ಲ: ಯಾರೊಬ್ಬರು ಲಕ್ಷ್ಮಣ ರೇಖೆ ದಾಟುವುದಿಲ್ಲ'
ರಾಜ್ಯ ಬಿಜೆಪಿಯಲ್ಲಿ ಯಾವುದೇ ಕಿತ್ತಾಟವಿಲ್ಲ. ಸರ್ಕಾರ ಸುಭದ್ರವಾಗಿದೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಆಂತರಿಕ ಕಚ್ಚಾಟದಿಂದ ಬಿಜೆಪಿ ಸರ್ಕಾರ ಪತನವಾಗಲಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನುಡಿದ ಭವಿಷ್ಯಕ್ಕೆ ತಿರುಗೇಟು ನೀಡಿದರು.