ರಾಜ್ಯನಗರದ 100 ಕಿಮೀ ವ್ಯಾಪ್ತಿಯಲ್ಲಿ ಎಸಿ ಬಸ್ ಸೇವೆ ಆರಂಭಿಸಲು KSRTC ಮುಂದು..!
ವಿವಿಧ ಉದ್ದೇಶಗಳಿಗಾಗಿ ಪ್ರತಿನಿತ್ಯ ನಗರಕ್ಕೆ ಸಾವಿರಾರು ಜನರು ಪ್ರಯಾಣಿಸುತ್ತಿರುತ್ತಾರೆ. ವಿದ್ಯಾರ್ಥಿಗಳು, ಟೆಕ್ಕಿಗಳು, ಕಾರ್ಮಿಕರು ಮತ್ತು ವ್ಯಾಪಾರಿಗಳು ಬೆಂಗಳೂರಿಗೆ ಹತ್ತಿರವಿರುವ ಕೋಲಾರ, ತುಮಕೂರು, ಆನೇಕಲ್, ರಾಮನಗರ, ಕನಕಪುರ, ಚನ್ನಪಟ್ಟಣ, ಮಂಡ್ಯ, ಚಿಕ್ಕಬಳ್ಳಾಪುರ, ಹೊಸೂರಿಗೆ ಪ್ರಯಾಣ ಮಾಡುತ್ತಿರುತ್ತಾರೆ.