ರಾಜ್ಯಟಿಡಿಆರ್ ಅಕ್ರಮ: ಪಾಲಿಕೆ ಎಂಜಿನಿಯರ್, ಮಧ್ಯವರ್ತಿಗಳ ನಿವಾಸಗಳ ಮೇಲೆ ಎಸಿಬಿ ದಾಳಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ವ್ಯಾಪ್ತಿಯಲ್ಲಿ ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್) ಅವ್ಯವಹಾರ ನಡೆದಿರುವುದನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಯಲಿಗೆಳೆದಿದ್ದು, ಪಾಲಿಕೆ ಸಹಾಯಕ ಎಂಜಿನಿಯರ್ ಸೇರಿದಂತೆ ನಾಲ್ವರ ನಿವಾಸಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.