ರಾಜ್ಯಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ: 625 ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು!
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ(KSEAB) 2022-23ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ.