ರಾಜ್ಯಹಾಸನ: ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್, ಇತರೆ ವಿದ್ಯಾರ್ಥಿ, ಸಿಬ್ಬಂದಿಗೆ ಸಂಕಷ್ಟ
ಕೊರೋನಾ ಭೀತಿಯ ನಡುವೆಯೂ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಿದೆ. ಶಿಕ್ಷಣ ಇಲಾಖೆ ಎಷ್ಟೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡರೂ ಪೋಷಕರ ನಿರ್ಲಕ್ಷ್ಯದಿಂದಾಗಿ ಸೋಂಕಿತ ವಿದ್ಯಾರ್ಥಿಯೊಬ್ಬ ಶನಿವಾರ ಪರೀಕ್ಷೆ ಬರೆದಿದ್ದು, ಆತನ ಜತೆಗೆ ಪರೀಕ್ಷೆ ಬರೆದ ಇತರೆ 17 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.