ರಾಜಕೀಯಗ್ಯಾರಂಟಿ ಯೋಜನೆಗಳ ಜಾರಿಗೆ ಎಸ್ ಸಿ, ಎಸ್ ಟಿ ಹಣ ದುರ್ಬಳಕೆ, ದಲಿತರಿಗೆ ಅನ್ಯಾಯ: ಬಸವರಾಜ ಬೊಮ್ಮಾಯಿ
ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣಕಾಸು ಹೊಂದಿಸಲು ಎಸ್ಸಿ ಎಸ್ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿ, ಎಸ್ ಸಿ, ಎಸ್ ಟಿ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.