ರಾಜ್ಯಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ: ಎಲ್ಲಾ ಆಯಾಮಗಳಲ್ಲೂ ತನಿಖೆ ಎಂದ ಸಚಿವ
ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಬೆಂಗಳೂರು ಗ್ರಾಮಾಂತರ ಉಪ ನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣದಲ್ಲಿ ಹಲವಾರು ಸಂಶಯಗಳಿದ್ದು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ ಎಂದು ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಭಾನುವಾರ ಹೇಳಿದರು.