ರಾಜ್ಯಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷಾ ಪ್ರಶ್ನೆ ಪತ್ರಿಕೆ ಲೀಕ್: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
ಎರಡೂವರೆ ಸಾವಿರ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಸಂಪೂರ್ಣ ವಿಭಿನ್ನವಾಗಿ, ಅತ್ಯಂತ ಸುರಕ್ಷಿತವಾಗಿ ನಿರ್ವಹಿಸುವ ವ್ಯವಸ್ಥೆ ಹಿಂದಿನಿಂದಲೂ ಜಾರಿಯಲ್ಲಿದ್ದು, ಅದನ್ನೇ ಈ ಬಾರಿಯೂ ನಿರ್ವಹಿಸಲಾಗುವುದು. ಅದರ ಬಗ್ಗೆ ಯಾವ ಗೊಂದಲಕ್ಕೆ, ಆತಂಕಕ್ಕೆ ಅವಕಾಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.