ದೇಶಕತುವಾ ಅತ್ಯಾಚಾರ, ಹತ್ಯೆ ಪ್ರಕರಣ: ಎಸ್ಐಟಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರ್ಟ್ ಆದೇಶ
2018ರಲ್ಲಿ ಜಮ್ಮು ಮತ್ತು ಕಾಶ್ಮೀರದ ಕತುವಾದಲ್ಲಿ ನಡೆದ 8 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ತೀರ್ಪು ಪ್ರಕಟಗೊಂಡ ನಾಲ್ಕು ತಿಂಗಳ ನಂತರ ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡ(ಎಸ್ಐಟಿ)ದ ಸದಸ್ಯರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮಂಗಳವಾರ ಕೋರ್ಟ್ ಆದೇಶಿಸಿದೆ.