ರಾಜ್ಯಎಸ್ಟಿ/ಎಸ್ಸಿ ವಿದ್ಯಾರ್ಥಿ ನಿಲಯಗಳಲ್ಲಿ ಸ್ಥಳಾವಕಾಶದ ಕೊರತೆ: ಪರಿಹಾರ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಉತ್ತರ ಕನ್ನಡ ಜಿಲ್ಲೆ ಶಿರಸಿಯ ಮೆಟ್ರಿಕ್ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಮಿತಿ 50 ಇದ್ದು, ಅಲ್ಲಿ 150 ವಿದ್ಯಾರ್ಥಿಗಳು ಇದ್ದಾರೆ. ಕೊಪ್ಪಳದ ಹಾಸ್ಟೆಲ್ನಲ್ಲಿ 75 ಪ್ರವೇಶ ಮಿತಿ ಇದ್ದರೆ, 214 ವಿದ್ಯಾರ್ಥಿಗಳು ಇದ್ದಾರೆ. ರಾಜ್ಯದ ಬಹುತೇಕ ವಿದ್ಯಾರ್ಥಿ ನಿಲಯಗಳ ಸ್ಥಿತಿ ಇದೇ ಆಗಿದೆ.