ರಾಜ್ಯಜನರ ಲಸಿಕೆ ಕಾರ್ಯಕರ್ತರಿಗೆ: ಬಿಜೆಪಿ ಶಾಸಕ ಎಸ್. ರಘು ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ!
ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ಶಾಸಕರು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ಬೆಡ್ ಬ್ಲಾಕಿಂಗ್, ವ್ಯಾಕ್ಸಿನ್ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿಕೊಂಡಿದ್ದಾರೆಂಬ ಆರೋಪಗಳು ಕೇಳಿ ಬಂದ ಬೆನ್ನಲ್ಲೇ ಸಿ.ವಿ.ರಾಮನ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ರಘು ಅವರ ವಿರುದ್ಧವೂ ಲಸಿಕೆ ದುರ್ಬಳಕೆ ಆರೋಪ ಕೇಳಿಬಂದಿದೆ.