ರಾಜ್ಯಧಾನ್ಯ ಸರಬರಾಜು ಏಜೆನ್ಸಿಗಳ 2,040 ಕೋಟಿ ರೂ. ಬಾಕಿ ಹಣ ಬಿಡುಗಡೆ ಮಾಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಬಿಳಿಜೋಳ ಹಾಗೂ ಅಕ್ಕಿ ಸರಬರಾಜು ಮಾಡಿರುವ ರಾಜ್ಯದ ಏಜೆನ್ಸಿಗಳಿಗೆ ಕೇಂದ್ರ ಸರ್ಕಾರ ರೂ.2,040 ಕೋಟಿ ಉಳಿಸಿಕೊಂಡಿದ್ದು, ಅದನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಆಗ್ರಹಿಸಿದೆ.