ಏಮ್ಸ್ ಆಸ್ಪತ್ರೆ

ಮಾಜಿ ಉಪ ರಾಷ್ಟ್ರಪತಿ Jagdeep Dhankhar ಎರಡು ಬಾರಿ ಪ್ರಜ್ಞಾಹೀನ; ಆಸ್ಪತ್ರೆಗೆ ದಾಖಲು!
ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಸೋಮವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಗೆ ದಾಖಲಿಸಲಾಗಿದೆ.

ಉತ್ತರಾಖಂಡ್: ಆರೋಪಿಯನ್ನು ಹಿಡಿಯಲು AIIMS ವಾರ್ಡ್ ಗೆ ನುಗ್ಗಿದ ಪೊಲೀಸ್ SUV!
ಉತ್ತರಾಖಂಡ್ ನ AIIMS ಆಸ್ಪತ್ರೆಯಲ್ಲಿ ಸಿನಿಮೀಯ ರೀತಿಯ ಘಟನೆ ವರದಿಯಾಗಿದ್ದು, ಪೊಲೀಸರು ಆರೋಪಿಯನ್ನು ಹಿಡಿಯಲು ಆಸ್ಪತ್ರೆಯ ವಾರ್ಡ್ ಗೆ ನುಗ್ಗಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುಣಮುಖ, ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ತೀವ್ರ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುಣಮುಖರಾಗಿದ್ದು, ಆಸ್ರತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಸಂಪೂರ್ಣ ವೈದ್ಯಕೀಯ ತಪಾಸಣೆಗೆ ಗೃಹ ಸಚಿವ ಅಮಿತ್ ಶಾ ದಾಖಲಾಗಿದ್ದಾರೆ:ಏಮ್ಸ್ ಆಸ್ಪತ್ರೆ
ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಸಂಪೂರ್ಣ ವೈದ್ಯಕೀಯ ತಪಾಸಣೆಗಾಗಿ ಒಂದೆರಡು ದಿನಗಳ ಕಾಲ ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆ ತಿಳಿಸಿದೆ.

ಮತ್ತೆ ಆಸ್ಪತ್ರೆಗೆ ದಾಖಲಾದ ಗೃಹ ಸಚಿವ ಅಮಿತ್ ಶಾ:ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಎರಡು ವಾರಗಳು ಕಳೆದ ನಂತರ ಮತ್ತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಸ್ಪತ್ರೆ ಸೇರಿದ್ದಾರೆ. ನಿನ್ನೆ ಮತ್ತೆ ಅವರಿಗೆ ಉಸಿರಾಟದ ಸಮಸ್ಯೆ ಕಂಡುಬಂದಿದ್ದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಒಪಿಡಿ ಸೇವೆ ಸ್ಥಗಿತ ಇಲ್ಲ, ಯಥಾ ಪ್ರಕಾರ ಮುಂದುವರಿಕೆ: ದೆಹಲಿಯ ಏಮ್ಸ್ ಆಸ್ಪತ್ರೆ ಸ್ಪಷ್ಟನೆ
ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಯ ಹೊರ ರೋಗಿಗಳ ವಿಭಾಗದ ಸೇವೆ ಯಥಾ ಪ್ರಕಾರ ಮುಂದುವರಿಯುತ್ತದೆ ಎಂದು ಆಸ್ಪತ್ರೆ ಹೇಳಿಕೆ ಮೂಲಕ ಸ್ಪಷ್ಟಪಡಿಸಿದೆ.

ಸಂಪೂರ್ಣ ಗುಣಮುಖರಾಗಿ ಏಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ಗೃಹ ಸಚಿವ ಅಮಿತ್ ಶಾ
ಕೊರೋನಾ ನಂತರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಇದೀಗ ಸಂಪೂರ್ಣ ಗುಣಮುಖರಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಕೋವಿಡ್-19; ಅಮಿತ್ ಶಾ ಗೆ ಮೈಕೈ ನೋವು, ಬಳಲಿಕೆ, ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲು!
ಇತ್ತೀಚಿಗೆ ಕೊರೋನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೆಹಲಿ ಏಮ್ಸ್ ನಲ್ಲಿ ಮತ್ತೆ ಇಬ್ಬರು ವೈದ್ಯರು ಸೇರಿದಂತೆ 11 ವೈದ್ಯಕೀಯ ಸಿಬ್ಬಂದಿಗೆ ಕೊರೋನಾ ಸೋಂಕು!
ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಆಸ್ಪತ್ರೆ ಏಮ್ಸ್ ನಲ್ಲಿ ಇಬ್ಬರು ವೈದ್ಯರು ಸೇರಿದಂತೆ ಮತ್ತೆ 11 ವೈದ್ಯಕೀಯ ಸಿಬ್ಬಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ಆ ಮೂಲಕ ಏಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿಗೆ ತುತ್ತಾದ ವೈದ್ಯಕೀಯ ಸಿಬ್ಬಂದಿಗಳ ಸಂಖ್ಯೆ 206ಕ್ಕೆ ಏರಿಕೆಯಾಗಿದೆ.

