ಐಎನ್ ಎಕ್ಸ್ ಮೀಡಿಯಾ ಹಗರಣ

ಸುಪ್ರೀಂಕೋರ್ಟ್ ನಲ್ಲಿ ಚಿದಂಬರಂ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ಇಡಿ
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರಿಗೆ ಜಾಮೀನು ನೀಡದಂತೆ ಸುಪ್ರೀಂಕೋರ್ಟ್ ಗೆ ಇಡಿ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಐಎನ್ಎಕ್ಸ್ ಮೀಡಿಯಾ ಹಗರಣ: ತಿಹಾರ್ ಜೈಲಿನಲ್ಲಿ ಚಿದಂಬರಂ ವಿಚಾರಣೆಗೆ ದೆಹಲಿ ಕೋರ್ಟ್ ಅಸ್ತು
ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ವಿತ್ತ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರನ್ನು ತಿಹಾರ್ ಜೈಲಿನಲ್ಲಿಯೇ ವಿಚಾರಣೆಗೆ ಒಳಪಡಿಸಲು ದೆಹಲಿ ಕೋರ್ಟ್ ಗುರುವಾರ ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ಅನುಮತಿ ನೀಡಿದೆ.

ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂ ನ್ಯಾಯಾಂಗ ಬಂಧನ ಅವಧಿ ನ. 27ರ ವರೆಗೆ ವಿಸ್ತರಣೆ
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ನವೆಂಬರ್ 27ರ ವರೆಗೆ ವಿಸ್ತರಿಸಿದೆ.

ಐಎನ್ ಎಕ್ಸ್ ಮೀಡಿಯಾ ಹಗರಣ: ಹೈಡ್ರಾಮಾ ನಡುವೆ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಬಂಧನ
ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಬಂಧನವಾಗಿದೆ.

