ಐಎನ್ಎಕ್ಸ್ ಮೀಡಿಯಾ ಕೇಸ್

ಐಎನ್ ಎಕ್ಸ್ ಮೀಡಿಯಾ ಕೇಸ್: 105 ದಿನಗಳ ನಂತರ ಪಿ.ಚಿದಂಬರಂ ಗೆ ಷರತ್ತುಬದ್ಧ ಜಾಮೀನು
ಐಎನ್‌ಎಕ್ಸ್ ಮೀಡಿಯಾ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

ಪಿ ಚಿದಂಬರಂಗೆ ಮತ್ತೆ ಹಿನ್ನಡೆ: ಏಮ್ಸ್ ವರದಿ ಬೆನ್ನಲ್ಲೇ ಜಾಮೀನು ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್
ಸಿಬಿಐ ವಶದಲ್ಲಿರುವ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರಿಗೆ ಮತ್ತೆ ಹಿನ್ನಡೆಯಾಗಿದ್ದು, ಅವರ ಆರೋಗ್ಯ ಕುರಿತ ಏಮ್ಸ್ ವೈದ್ಯರ ವರದಿ ಬೆನ್ನಲ್ಲೇ ದೆಹಲಿ ಹೈಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದೆ.

ಪಿ.ಚಿದಂಬರಂ ಆರೋಗ್ಯವಾಗಿದ್ದಾರೆ, ಆಸ್ಪತ್ರೆಗೆ ದಾಖಲಿಸುವ ಅಗತ್ಯವಿಲ್ಲ: ಏಮ್ಸ್ ವರದಿ
ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಶದಲ್ಲಿರುವ ಮಾಜಿ ಕೇಂದ್ರ ಸಚಿವ ಪಿ ಚಿದಂಬಂರಂ ಅವರ ಆರೋಗ್ಯ ಸರಿ ಇದ್ದು, ಆಸ್ಪತ್ರೆಗೆ ದಾಖಲಿಸಬೇಕಾದ ಅಗತ್ಯವಿಲ್ಲ ಎಂದು ಏಮ್ಸ್ ಆಸ್ಪತ್ರೆಯ ವೈದ್ಯರ ಸಮಿತಿ ದೆಹಲಿ ಹೈಕೋರ್ಟ್ ಗೆ ವರದಿ ನೀಡಿದೆ.

ಚಿದಂಬರಂಗೆ ಅನಾರೋಗ್ಯ: ಮಧ್ಯಂತರ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ಮಾಜಿ ಸಚಿವ
ಐಎನ್‌ಎಕ್ಸ್ ಮೀಡಿಯಾ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಬುಧವಾರ ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಐಎನ್‌ಎಕ್ಸ್ ಮೀಡಿಯಾ: ಚಿದಂಬರಂ ಇಡಿ ಕಸ್ಟಡಿ ಅಕ್ಟೋಬರ್ 30ರವರೆಗೆ ವಿಸ್ತರಣೆ
ಐಎನ್ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ಅಕ್ಟೋಬರ್ 30ವರೆಗೆ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ನೀಡಿದೆ.

ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಜಾಮೀನು ಕೋರಿ ಸುಪ್ರೀಂ ಮೊರೆಹೋದ ಚಿದಂಬರಂ
ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮಂಗಳವಾರ ತಮಗೆ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ ವಿರುದ್ಧ ಪ್ರೊಡಕ್ಷನ್ ವಾರಂಟ್ ಜಾರಿ
ಐಎನ್‌ಎಕ್ಸ್ ಮೀಡಿಯಾ ಮನಿ ಲ್ಯಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಅರ್ಜಿಯನ್ನು ಕೇಳಿದ ದೆಹಲಿ ಕೋರ್ಟ್ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ವಿರುದ್ಧ ಅಕ್ಟೋಬರ್ 14ಕ್ಕೆ ಹಾಜರುಪಡಿಸಿ ಎಂದು ಪ್ರೊಡಕ್ಷನ್ ವಾರಂಟ್ ಹೊರಡಿಸಿದೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ ನ್ಯಾಯಾಂಗ ಬಂಧನ ಅವಧಿ ಅ.3ರ ವರೆಗೆ ವಿಸ್ತರಣೆ
ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 3ರ ವರೆಗೆ ವಿಸ್ತರಿಸಲಾಗಿದೆ.

ತಿಹಾರ್ ಜೈಲಿಗೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ!
ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ದೆಹಲಿ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

