ರಾಜ್ಯಸಾ.ರಾ. ಮಹೇಶ್ ಜೊತೆ ರಾಜಿಗೆ ಯತ್ನ: ರೋಹಿಣಿ ಸಿಂಧೂರಿಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಐಪಿಎಸ್ ಅಧಿಕಾರಿ ಡಿ.ರೂಪಾ
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಶಾಸಕ ಸಾ.ರಾ ಮಹೇಶ್ ಅವರ ವಿರುದ್ಧ ಭೂ ಕಬಳಿಕೆ ಆರೋಪವನ್ನು ಮಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಸಾ.ರಾ ಮಹೇಶ್ ಅವರು ಕೂಡ ಪ್ರತಿಕ್ರಿಯೆಗಳನ್ನು ನೀಡುತ್ತಾ ಬರುತ್ತಿದ್ದರು. ಇಬ್ಬರ ನಡುವಿನ ಜಟಾಪಟಿ ಇಡೀ ರಾಜ್ಯದ ಗಮನವನ್ನು ಸೆಳೆದಿತ್ತು. ಸದ್ಯ ಈ ಜಟಾಪಟಿಗೆ ಹೊಸ ಬೆಳವಣಿಗೆಯೊಂದು ನಡೆದಿದೆ.