ರಾಜ್ಯಐಜಿಪಿ ರೂಪಾ ಖಡಕ್ ಎಚ್ಚರಿಕೆಗೆ ಬೆಚ್ಚಿದ ಖಾಸಗಿ ಆಸ್ಪತ್ರೆ: ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ ರೂ. 24 ಲಕ್ಷ ವಾಪಸ್!
ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಹಿರಿಯ ಐಎಎಸ್ ಅಧಿಕಾರಿ ಹರ್ಷ ಗುಪ್ತ ಮತ್ತು ಐಜಿಪಿ ಡಿ.ರೂಪಾ ನೇತೃತ್ವದ ತಂಡ ಎಚ್ಚರಿಕೆ ನೀಡಿದ ಬೆನ್ನಲ್ಲೇ ಕೊರೋನಾ ಚಿಕಿತ್ಸೆ ಸಲುವಾಗಿ 22 ಮಂದಿ ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ ರೂ. 24 ಲಕ್ಷ ಹಣವನ್ನು ರಾಜರಾಜೇಶ್ವರಿ ನಗರ ಸಮೀಪದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಸೋಮವಾರ ಹಿಂತಿರುಗಿಸಿದೆ.