ಐದು ಗ್ಯಾರಂಟಿಗಳು

ಮುಂದಿನ ಎರಡು ವರ್ಷಕ್ಕಷ್ಟೇ ಅಲ್ಲ...: ಐದು ಗ್ಯಾರಂಟಿಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ, ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ನಾನು ಸಿಎಂ ಆಗಿದ್ರೆ ಗ್ಯಾರಂಟಿಗಳನ್ನು ಜಾರಿಗೆ ತರುತ್ತಿರಲಿಲ್ಲ: ಆರ್.ವಿ ದೇಶಪಾಂಡೆ; ಸ್ಪಷ್ಟನೆ ಕೋರಿದ ಸಿದ್ದರಾಮಯ್ಯ; Video
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಂಬೇವಾಡಿ ನವಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಕರ್ನಾಟಕ ಆಯ್ತು, ಈಗ ತೆಲಂಗಾಣದಲ್ಲೂ 'ಐದು ಗ್ಯಾರಂಟಿ' ಘೋಷಣೆಗೆ ಕಾಂಗ್ರೆಸ್ ವೇದಿಕೆ ಸಜ್ಜು!
ಕರ್ನಾಟಕ ಚುನಾವಣೆಯಲ್ಲಿ 'ಐದು ಗ್ಯಾರಂಟಿ' ಯೋಜನೆಗಳ ಮೂಲಕ ಗೆದ್ದು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ಇದೀಗ ತೆಲಂಗಾಣದಲ್ಲೂ ಇದೇ ಮಾದರಿಯಲ್ಲಿ ಅಧಿಕಾರ ಹಿಡಿಯಲು ಹವಣಿಸುತ್ತಿದೆ. ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಐದು ಗ್ಯಾರಂಟಿಗಳ ಘೋಷಣೆಗೆ ವೇದಿಕೆ ಸಜ್ಜಾಗಿದೆ.

ಅಧಿವೇಶನದ ಮೊದಲ ದಿನವೇ ಸರ್ಕಾರದಿಂದ ಪ್ರಜಾಪ್ರಭುತ್ವ ವಿರೋಧಿ ನಡೆ, ಗ್ಯಾರಂಟಿ ಜಾರಿಗೊಳಿಸದೇ ದೋಖಾ: ಬೊಮ್ಮಾಯಿ
ಹೊಸ ಕಾಂಗ್ರೆಸ್ ಸರ್ಕಾರ ಅಧಿವೇಶನದ ಮೊದಲ ದಿನವೇ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸಿದೆ. ಜನರಿಗೆ ಯಾವ ಗ್ಯಾರಂಟಿ ಹೇಳಿದ್ದರೊ ಅದನ್ನು ಅನುಷ್ಠಾನ ಮಾಡುವಲ್ಲಿ ಮೋಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ವಾರ್ಷಿಕವಾಗಿ 60,000 ಕೋಟಿ ರೂ. ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ನ ಎಲ್ಲಾ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ವಾರ್ಷಿಕವಾಗಿ ಒಟ್ಟಾರೇ ರೂ. 59,000 ದಿಂದ ರೂ.60,000 ಕೋಟಿ ರೂಪಾಯಿ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗ್ಯಾರಂಟಿಗಳ ಜಾರಿ ನಿರ್ಧಾರ ಜಾರಿತ್ರಿಕ; ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ: ಎಂ.ಬಿ.ಪಾಟೀಲ್
ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಹೇಳಿದ್ದೆವು. ಈಗ ಆ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಗ್ಯಾರಂಟಿ ವಿಚಾರದಲ್ಲಿ ಮಾತು ತಪ್ಪಿದರೆ ವಚನಭ್ರಷ್ಟ ಪೋಸ್ಟರ್ ರಿಲೀಸ್: ಎನ್.ರವಿಕುಮಾರ್
ಕಾಂಗ್ರೆಸ್ ಪಕ್ಷದವರು ಗ್ಯಾರಂಟಿ ವಿಚಾರದಲ್ಲಿ ನುಡಿದಂತೆ ನಡೆಯದೆ ಇದ್ದರೆ ವಚನ ಭ್ರಷ್ಟ ಪಟ್ಟ ಕಟ್ಟುತ್ತೇವೆ. ವಚನಭ್ರಷ್ಟ ಪೋಸ್ಟರ್ ರಿಲೀಸ್ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಎಚ್ಚರಿಸಿದ್ದಾರೆ.

ಗ್ಯಾರಂಟಿ ಅನುಷ್ಠಾನದಲ್ಲಿ ಕಾಂಗ್ರೆಸ್ ನಿಂದ ಜನತೆಗೆ ದೋಖಾ: ಬಸವರಾಜ ಬೊಮ್ಮಾಯಿ
ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳ ಜಾರಿ ವಿಚಾರದಲ್ಲಿ ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

'ವಿಪಕ್ಷ ನಾಯಕ' ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ: ಬಿಜೆಪಿಗೆ ಕಾಂಗ್ರೆಸ್ ಟಾಂಗ್
ನೂತನ ಸರ್ಕಾರ ರಚನೆಯಾಗಿ ಐದು ದಿನ ಕಳೆದರೂ ''ಐದು ಗ್ಯಾರಂಟಿ' ಅನುಷ್ಠಾನದ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಪ್ರತಿಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

