ಸಿನಿಮಾ ಸುದ್ದಿಬಿಗ್ ಬಾಸ್ ಖ್ಯಾತಿಯ ನಟಿ ಐಶ್ವರ್ಯಾ ಸಿಂಧೋಗಿಗೆ ಅಶ್ಲೀಲ ಕಮೆಂಟ್; ಸಂಜಯನಗರ ಠಾಣೆಯಲ್ಲಿ ದೂರು ದಾಖಲು
ಸಾಮಾಜಿಕ ಜಾಲತಾಣಗಳಲ್ಲಿ ಸೆಲೆಬ್ರಿಟಿಗಳಿಗೆ, ಅದರಲ್ಲೂ ವಿಶೇಷವಾಗಿ ಮಹಿಳಾ ನಟಿಯರಿಗೆ ಕಿರುಕುಳ ನೀಡುವುದು ಹೆಚ್ಚಾಗುತ್ತಿದೆ. ಇದೀಗ ಬಿಗ್ ಬಾಸ್ ಖ್ಯಾತಿಯ ಖ್ಯಾತ ನಟಿ ಐಶ್ವರ್ಯಾ ಸಿಂಧೋಗಿ ಅವರಿಗೂ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿದ್ದು, ಪೊಲೀಸ್ ಪ್ರಕರಣ ದಾಖಲಾಗಿದೆ.