ಕ್ರಿಕೆಟ್'ಒಂದೇ ಓವರ್ನಲ್ಲಿ 6 ಸಿಕ್ಸರ್': T20ಯಲ್ಲಿ ಈ ಸಾಧನೆ ಮಾಡಿದ 3ನೇ ಆಟಗಾರ ನೇಪಾಳದ ಐರಿ!
ನೇಪಾಳದ ದಿಪೇಂದ್ರ ಸಿಂಗ್ ಐರಿ ಇಲ್ಲಿ ನಡೆಯುತ್ತಿರುವ ಎಸಿಸಿ ಪುರುಷರ ಪ್ರೀಮಿಯರ್ ಕಪ್ T20 ಅಂತಾರಾಷ್ಟ್ರೀಯ ಪಂದ್ಯದ ವೇಳೆ ಶನಿವಾರ ಆತಿಥೇಯ ಕತಾರ್ ವಿರುದ್ಧ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಸಿಡಿಸಿದರು. ಈ ಮೂಲಕ ಟಿ-20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೂರನೇ ಆಟಗಾರ ಎಂಬ ಖ್ಯಾತಿಗೆ ಪಾತ್ರರಾದರು.