ರಾಜ್ಯಬೆಂಗಳೂರು: ಸೋಂಕಿತ ಗರ್ಭಿಣಿ ಮಹಿಳೆಯರಿಗಾಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಒಟಿ
ಗರ್ಭಿಣಿ ಮಹಿಳೆಯಲ್ಲಿ ಕೊರೋನಾ ಸೋಂಕು ಹೆಚ್ಚಾಗಿ ಹರಡುತ್ತಿದ್ದು, ಈ ಬೆಳವಣಿಗೆ ಆಸ್ಪತ್ರೆಯಲ್ಲಿನ ಸಿಬ್ಬಂದಿಗಳಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿರುವ ಬಹುತೇಕ ಆಸ್ಪತ್ರೆಗಳು ಇದೀಗ ಸೋಂಕಿತ ಗರ್ಭಿಣಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಒಟಿ (ಆಪರೇಷನ್ ಥಿಯೇಟರ್) ಸ್ಥಾಪಿಸಲು ಮುಂದಾಗಿವೆ.