ಒಡಿಶಾ ರೈಲು ಅಪಘಾತ ದುರಂತ

'ನಮ್ಮ ಜವಾಬ್ದಾರಿ ಇನ್ನೂ ಮುಗಿದಿಲ್ಲ, ನಾಪತ್ತೆಯಾದವರ ಪತ್ತೆ ಹಚ್ಚುವುದು ಮುಖ್ಯವಾಗಿದೆ': ರೈಲ್ವೆ ಸಚಿವ ಅಶ್ವಿನ್ ವೈಷ್ಣವ್
ಜೂನ್ 2 ರಂದು ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಮೂರು ರೈಲುಗಳ ಭೀಕರ ಅಪಘಾತದ ನಂತರ ನಾಪತ್ತೆಯಾದವರ ಕುಟುಂಬ ಸದಸ್ಯರನ್ನು ಆದಷ್ಟು ಬೇಗ ಪತ್ತೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ರೈಲ್ವೆ ನನ್ನ ಮಗು ಇದ್ದಂತೆ, ಯಾವುದೇ ಸಲಹೆ ನೀಡಲು ಸಿದ್ಧ: ಒಡಿಶಾ ದುರಂತದ ಬಗ್ಗೆ ಮಮತಾ ಬ್ಯಾನರ್ಜಿ
280 ಮಂದಿಯ ಸಾವಿಗೆ ಕಾರಣವಾಗಿರುವ ಒಡಿಶಾದ ಭೀಕರ ರೈಲು ಅಪಘಾತದ ಬಗ್ಗೆ ಪಶ್ಚಿಮ ಬಂಗಾಳ ಸಿಎಂ, ಮಾಜಿ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ ನೀಡಿದ್ದು, ತಾವು ಯಾವುದೇ ಸಲಹೆ ನೀಡುವುದಕ್ಕೂ ಸಿದ್ಧ ಎಂದು ಹೇಳಿದ್ದಾರೆ.

