ಓಮಿಕ್ರಾನ್ ಪ್ರಕರಣ

ಮಹಾರಾಷ್ಟ್ರ: ಎರಡು ಹೊಸ ಓಮಿಕ್ರಾನ್ ಪ್ರಕರಣ ಪತ್ತೆ, ಒಟ್ಟು ಪ್ರಕರಣಗಳ ಸಂಖ್ಯೆ 110ಕ್ಕೆ ಏರಿಕೆ
ಮಹಾರಾಷ್ಟ್ರದಲ್ಲಿ ಶನಿವಾರ ಕೊರೋನಾ ರೂಪಾಂತರಿ ಓಮಿಕ್ರಾನ್ ನ ಎರಡು ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 110ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಓಮಿಕ್ರಾನ್ ಸಂಖ್ಯೆ 415 ಕ್ಕೆ ಏರಿಕೆ; ಮಹಾರಾಷ್ಟ್ರದಲ್ಲಿ 108 ಮಂದಿಗೆ ಹೊಸ ರೂಪಾಂತರಿ ಸೋಂಕು
ಭಾರತದಲ್ಲಿ ಓಮಿಕ್ರಾನ್ ಅಟ್ಟಹಾಸ ನಿರಮತರವಾಗಿ ಮುಂದುವರೆಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಪ್ರಕರಣಗಳ ಸಂಖ್ಯೆ 358 ರಿಂದ 415ಕ್ಕೆ ಏರಿದೆ.

ದೇಶದ 11 ರಾಜ್ಯಗಳಲ್ಲಿ 101 ಓಮಿಕ್ರಾನ್ ಪ್ರಕರಣ ಪತ್ತೆ: ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ
ಇಲ್ಲಿಯವರೆಗೂ ದೇಶದಲ್ಲಿನ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 101 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ.

ಓಮಿಕ್ರಾನ್ ಪ್ರಕರಣ ಹೆಚ್ಚಾಗುವ ಆತಂಕ: ಮಹಾರಾಷ್ಟ್ರದಲ್ಲಿ ಕ್ರಿಸ್ ಮಸ್, ಹೊಸ ವರ್ಷಾಚರಣೆಗೆ ನಿರ್ಬಂಧ
ಕೊರೋನಾ ರೂಪಾಂತರಿ ಹೊಸ ತಳಿ ಓಮಿಕ್ರಾನ್ ಭೀತಿ ನಡುವೆ ಕ್ರಿಸ್ ಮಸ್ ಮತ್ತು ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಕೊರೋನಾವೈರಸ್ ಹರಡುವಿಕೆ ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಇಂದಿನಿಂದ ಡಿಸೆಂಬರ್ 31ರವರೆಗೆ ನಗರದಲ್ಲಿ ಸಿಆರ್ ಪಿಸಿ ಸೆಕ್ಷನ್ 144ರ ಅನ್ವಯ ಕಠಿಣ ನಿರ್ಬಂಧ ಜಾರಿಗೊಳಿಸಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಕೇರಳದಲ್ಲಿ ಮತ್ತೆ 4 ಓಮಿಕ್ರಾನ್ ಪ್ರಕರಣ ದೃಢ: ಹೊಸ ರೂಪಾಂತರಿ ಸಂಖ್ಯೆ 5ಕ್ಕೆ ಹೆಚ್ಚಳ
ಕೇರಳದಲ್ಲಿ ಬುಧವಾರ ಒಂದೇ ದಿನ 4 ಓಮಿಕ್ರಾನ್ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಆ ಮೂಲಕ ರಾಜ್ಯದಲ್ಲಿ ಹೊಸ ರೂಪಾಂತರಿ ಸೋಂಕು ಪ್ರಕರಣಗಳ ಸಂಖ್ಯೆ 5ಕ್ಕೇರಿದೆ.

ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ; ಆಂಧ್ರ ಪ್ರದೇಶ, ಕೇರಳ, ಚಂಡೀಗಢದಲ್ಲಿ ಮೊದಲ ಪ್ರಕರಣ ಪತ್ತೆ
ಭಾರತದಲ್ಲಿ ಕೋವಿಡ್-19 ವೈರಸ್ ನ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕ್ರಮೇಣ ಹೆಚ್ಚಳವಾಗುತ್ತಿದ್ದು, ಇದೀಗ ಕೇರಳ, ಆಂಧ್ರ ಪ್ರದೇಶ ಮತ್ತು ನಾಗಪುರದಲ್ಲಿ ಮೊದಲ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.

