ಓಮಿಕ್ರಾನ್ ಪ್ರಕರಣಗಳು

ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಹೆಚ್ಚಳ: 8 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾತ್ರಿ ಕರ್ಫ್ಯೂ ಜಾರಿ
ದೇಶದಲ್ಲಿ ಕೊರೋನಾ ರೂಪಾಂತರಿ ಓಮಿಕ್ರಾನ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ 8 ರಾಜ್ಯಗಳು, ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾತ್ರಿ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ.

ಓಮಿಕ್ರಾನ್ ಹೆಚ್ಚಳ: ಗುಜರಾತ್, ಉತ್ತರ ಪ್ರದೇಶದಲ್ಲಿ ರಾತ್ರಿ ಕರ್ಫ್ಯೂ ಬಳಿಕ ಈಗ ಮಹಾರಾಷ್ಟ್ರದಲ್ಲೂ ನಿರ್ಬಂಧ ಜಾರಿ
ಕೊರೋನಾ ರೂಪಾಂತರಿ ಓಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಮಹಾರಾಷ್ಟ್ರದಲ್ಲಿ 20 ಕ್ಕಿಂತಲೂ ಹೆಚ್ಚಿನ ಓಮಿಕ್ರಾನ್ ಪ್ರಕರಣಗಳು ವರದಿಯಾಗಿದೆ.

17 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 358 ಓಮಿಕ್ರಾನ್ ಪ್ರಕರಣ ಪತ್ತೆ: ಕೇಂದ್ರ ಸರ್ಕಾರ
ದೇಶದಲ್ಲಿನ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 358 ಓಮಿಕ್ರಾನ್ ಪ್ರಕರಣಗಳಿವೆ. ಈ ಪೈಕಿ 114 ಪ್ರಕರಣಗಳು ಗುಣಮುಖರಾಗಿರುವುದಾಗಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಶುಕ್ರವಾರ ತಿಳಿಸಿದ್ದಾರೆ.

ಓಮಿಕ್ರಾನ್ ಭೀತಿ: ಸಾರ್ವಜನಿಕ ಸಭೆಗಳನ್ನು ನಿಲ್ಲಿಸಿ, ಚುನಾವಣೆ ಮುಂದೂಡಲು ಕೇಂದ್ರಕ್ಕೆ 'ಹೈ' ಸಲಹೆ
ದೇಶಾದ್ಯಂತ ಓಮಿಕ್ರಾನ್ ಭೀತಿ ಎದುರಾಗಿದ್ದು ಸಾರ್ವಜನಿಕ ಸಭೆಗಳನ್ನು ನಿಲ್ಲಿಸಿ ಚುನಾವಣೆ ಮುಂದೂಡಲು ಕೇಂದ್ರ ಸರ್ಕಾರಕ್ಕೆ ಅಲ್ಲಹಾಬಾದ್ ಹೈಕೋರ್ಟ್ ಸಲಹೆ ನೀಡಿದೆ.

ಮುಂದಿನ ಮೂರು ತಿಂಗಳು ಮಹತ್ವದ್ದು, ಓಮಿಕ್ರಾನ್ ಪ್ರಕರಣಗಳನ್ನು ಸೌಮ್ಯ, ಕೆಲವೆಂದು ತಳ್ಳಿಹಾಕಬೇಡಿ- ತಜ್ಞರು
ಮುಂದಿನ ಮೂರು ತಿಂಗಳು ಬಹಳ ಮಹತ್ವದ್ದಾಗಿದೆ. ರಾಜ್ಯ ಸರ್ಕಾರ ತನ್ನ ಆಸ್ಪತ್ರೆಗಳನ್ನು ಸಿದ್ಧತೆ ಮಾಡಿಕೊಳ್ಳಬೇಕಾಗಿದೆ. ಓಮಿಕ್ರಾನ್ ಪ್ರಕರಣಗಳ ಹೊರಹೊಮ್ಮುವಿಕೆಯನ್ನು 'ಸೌಮ್ಯ' ಅಥವಾ 'ಕೆಲವು' ಎಂದು ತಳ್ಳಿಹಾಕಬೇಡಿ ಎಂದು ತಜ್ಞರು ಎಚ್ಚರಿಸಿದ್ದಾರೆ

ಕರ್ನಾಟಕದಲ್ಲಿ ಎರಡು ಓಮಿಕ್ರಾನ್ ಪ್ರಕರಣಗಳು ಸಂಪರ್ಕಿತರಿಗೆ ಸೋಂಕು ಕಂಡುಬಂದಿಲ್ಲ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ರಾಜ್ಯದಲ್ಲಿ ಪತ್ತೆಯಾದ ಒಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಯಾವುದೇ ಆರೋಗ್ಯ ಸಮಸ್ಯೆ, ಅಥವಾ ರೋಗ ಲಕ್ಷಣ ಕಂಡುಬಂದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

