ರಾಜ್ಯಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಸಮಸ್ಯೆಗೆ ಇಲಾಖೆಯೊಳಗಿನ ಸಮನ್ವಯ ಕೊರತೆ ಮುಖ್ಯ ಕಾರಣ: ಕೆಎಸ್ಎಂಎಸ್ ಸಿಎಲ್
ಔಷಧ ಕಂಪೆನಿಗಳಿಗೆ ಸರಿಯಾಗಿ ಪಾವತಿ ಮಾಡದಿರುವುದು, ಹಣ ಪಾವತಿಯಲ್ಲಿ ವಿಳಂಬಕ್ಕೆ ಸರ್ಕಾರದ ಇಲಾಖೆಯೊಳಗಿನ ಸಮನ್ವಯ ಕೊರತೆ ಮತ್ತು ನಿರ್ಧಾರ ತೆಗೆದುಕೊಳ್ಳುವಲ್ಲಿ ಹಿಂಜರಿಕೆಯೇ ಮುಖ್ಯ ಕಾರಣವಾಗಿದೆ ಎಂದು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ (KSMSCL) ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ಎಸ್ ವಟಾರೆ ತಿಳಿಸಿದ್ದಾರೆ.