ಕಂಚು

Asian Games 2026: ಬಾಂಗ್ಲಾದೇಶ ವಿರುದ್ಧ 31 ರನ್ ಜಯ ಸಾಧಿಸಿದ ಪಾಕಿಸ್ತಾನ; ಕಂಚಿನ ಪದಕ ಪಡೆದ ಮಹಿಳಾ ತಂಡ
ಸೆಮಿಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಪಾಕಿಸ್ತಾನ ತಂಡವು ಸೋಲು ಕಂಡಿತ್ತು. ಮತ್ತೊಂದೆಡೆ, ನಿಗಾರ್ ಸುಲ್ತಾನಾ ನೇತೃತ್ವದ ಬಾಂಗ್ಲಾದೇಶ ತಂಡವು ಸೆಮಿಫೈನಲ್‌ನಲ್ಲಿ ಭಾರತದ ವಿರುದ್ಧ ಸೋಲು ಕಂಡಿತ್ತು.

Paralympics 2024: 100 ಮೀ. ಓಟದ ಸ್ಪರ್ಧೆಯಲ್ಲಿ ಕಂಚು ಗೆದ್ದ ಪ್ರೀತಿ ಪಾಲ್; ಭಾರತದ ಪದಕಗಳ ಸಂಖ್ಯೆ ಮೂರಕ್ಕೆ ಏರಿಕೆ
ಮಹಿಳೆಯರ 100 ಮೀಟರ್ ಟಿ35 ಸ್ಪರ್ಧೆಯ ಫೈನಲ್‌ನಲ್ಲಿ ಪ್ರೀತಿ ಪಾಲ್ ಅವರು ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು.

Paris Olympics 2024: 25 ಮೀ. ಪಿಸ್ತೂಲ್ ಶೂಟಿಂಗ್ನಲ್ಲಿ ಮನು ಭಾಕರ್ ಫೈನಲ್‌ಗೆ ಲಗ್ಗೆ, ಹ್ಯಾಟ್ರಿಕ್ ಪದಕಕ್ಕೆ ಇನ್ನೊಂದೇ ಹೆಜ್ಜೆ ಬಾಕಿ
ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳೆಯರ 25 ಪಿಸ್ತೂಲ್ ಸ್ಪರ್ಧೆಯಲ್ಲಿ ಶುಕ್ರವಾರ ಮನು ಭಾಕರ್ 590-24x ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದು ಫೈನಲ್‌ಗೆ ಪ್ರವೇಶಿಸಿದರು.

Paris Olympics 2024: ಶೂಟಿಂಗ್ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಮನು ಭಾಕರ್-ಸರಬ್ಜೋತ್ ಸಿಂಗ್ ಜೋಡಿ
2 ದಿನಗಳ ಹಿಂದಷ್ಟೇ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದ ಮನು, ಇದೀಗ 2ನೇ ಪದಕ ಗೆಲ್ಲುವ ಮೂಲಕ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಏಷ್ಯನ್ ಗೇಮ್ಸ್ 2023: ಜ್ಯೋತಿ, ಓಜಾಸ್ ಗೆ ಚಿನ್ನ, ಅಭಿಷೇಕ್ ವರ್ಮಾಗೆ ಬೆಳ್ಳಿ, ಅರ್ಚರಿಯಲ್ಲಿ ದಾಖಲೆಯ ಪದಕ!
ಚೀನಾದ ಹ್ಯಾಂಗ್ ಝೌ ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023 ರಲ್ಲಿ ಶನಿವಾರ ಕಂಪೌಂಡ್ ಅರ್ಚರಿಯಲ್ಲಿ ಭಾರತದ ಜ್ಯೋತಿ ಸುರೇಖಾ ವೆನ್ನಮ್ ಅವರು ಹ್ಯಾಟ್ರಿಕ್ ಚಿನ್ನ ಗೆದ್ದರೆ, ಅದಿತಿ ಸ್ವಾಮಿ ಕಂಚು ಪದಕ ಗೆಲ್ಲುವುದರೊಂದಿಗೆ ದೇಶದ ಅರ್ಚರಿ ಆಟಗಾರರು ದಾಖಲೆಯ 9 ಪದಕಗಳನ್ನು ಖಚಿತಪಡಿಸಿದ್ದಾರೆ.

ಟೋಕಿಯೊ ಪ್ಯಾರಾಲಿಂಪಿಕ್ಸ್: ಅರ್ಚರಿಯಲ್ಲಿ ಭಾರತಕ್ಕೆ ಮೊದಲ ಪದಕ, ಕಂಚು ಗೆದ್ದ ಹರ್ವಿಂದರ್ ಸಿಂಗ್
ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಅರ್ಚರಿಯಲ್ಲಿ ಭಾರತಕ್ಕೆ ಮೊದಲ ಪದಕ ಲಭಿಸಿದೆ. ಶುಕ್ರವಾರ ನಡೆದ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ದಕ್ಷಿಣ ಕೊರಿಯಾದ ಕಿಮ್ ಮಿನ್ ಸು ವಿರುದ್ಧ ಗೆಲುವು ಸಾಧಿಸಿದ ಹರ್ವಿಂದರ್ ಸಿಂಗ್ ಕಂಚಿನ ಪದಕ ಗಳಿಸಿದರು.

ವಿಶ್ವ ಪ್ಯಾರಾ ಅಥ್ಲೆಟಿಕ್ಸ್: ಭಾರತಕ್ಕೆ 9ನೇ ಟೋಕಿಯೊ ಪ್ಯಾರಾಲಿಂಪಿಕ್ಸ್ ಕೋಟಾ, ನಿಶಾದ್ ಕುಮಾರ್ ಗೆ ಕಂಚು
ದುಬೈನಲ್ಲಿ ನಡೆಯುತ್ತಿರುವ ದುಬೈ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಪುರುಷರ ಹೈ ಜಂಪ್ ವಿಭಾಗದಲ್ಲಿ ಭಾರತದ ನಿಶಾದ್ ಕುಮಾರ್ ಅವರು ಎರಡು ಮೀಟರ್ ಜಿಗಿದು ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ. ಇದರೊಂದಿಗೆ 2020ರ ಟೋಕಿಯೊ ಪ್ಯಾರಾಲಿಂಪಿಕ್ಸ್ ಗೆ ಅರ್ಹತೆ ಪಡೆಯುವಲ್ಲಿ ಸಫಲರಾಗಿದ್ದಾರೆ.

ವಿಶ್ವ ಅರ್ಚರಿ ಚಾಂಪಿಯನ್ ಶಿಪ್: ಭಾರತ ಮಹಿಳೆಯರಿಗೆ ಕಂಚಿನ ಹಾರ
ಇಲ್ಲಿ ನಡೆಯುತ್ತಿರುವ ವಿಶ್ವ ಆರ್ಚರಿ ಚಾಂಪಿಯನ್ ಶಿಪ್ ನಲ್ಲಿ ಭಾರತದ ವನಿತೆಯರ ಕಾಂಪೌಂಡ್ ತಂಡ ತುರ್ಕಿಯನ್ನು ಮಣಿಸಿ ಕಂಚಿನ ಪದಕವನ್ನು ಜಯಿಸಿದೆ.

ಕುಸ್ತಿ ಚಾಂಪಿಯನ್ ಶಿಪ್: ಪೂಜಾ ಧಂಡಾಗೆ ಐತಿಹಾಸಿಕ ಕಂಚು, 6 ವರ್ಷದಲ್ಲಿ ಪದಕ ಗೆದ್ದ ಮೊದಲ ಮಹಿಳಾ ಕುಸ್ತಿ ತಾರೆ
ಹಂಗೇರಿಯಲ್ಲಿ ನಡೆಯುತ್ತಿರುವ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಭಾರತದ ಪೂಜಾ ಧಂಡಾ ಕಂಚಿನ ಪದಕ ಗಳಿಸಿದ್ದಾರೆ. ಈ ಮೂಲಕ ಕಳೆದ ಆರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ....

