ರಾಜ್ಯಪೊಲೀಸರಿಂದ ಕಿರುಕುಳಕ್ಕೊಳಗಾದ ಕಾರ್ಯಕರ್ತರಿಗೆ ನೆರವಾಗಲು ಕಂಟ್ರೋಲ್ ರೂಂ ಸ್ಥಾಪನೆಗೆ ಬಿಜೆಪಿ ನಿರ್ಧಾರ!
ಪ್ರತಿಪಕ್ಷ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರನ್ನು ಗುರಿಯಾಗಿಸಿಕೊಂಡು ಪೊಲೀಸರು ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳನ್ನು ಸ್ವೀಕರಿಸಲು ರಾಜ್ಯ ಹಾಗೂ ಜಿಲ್ಲೆಗಳ ಪಕ್ಷದ ಕಚೇರಿಗಳಲ್ಲಿ ಕಂಟ್ರೋಲ್ ರೂಂಗಳನ್ನು ತೆರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾನುವಾರ ಹೇಳಿದ್ದಾರೆ.