ರಾಜ್ಯಎಲ್ಲಾ ಜಮೀನುಗಳ ಮರು ಸಮೀಕ್ಷೆಗೆ ಚಾಲನೆ: ಸಚಿವ ಕೃಷ್ಣ ಬೈರೇಗೌಡ
ಭೂ ಸರ್ವೆ ವಿಚಾರದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಇದರಿಂದಾಗಿ, ರೈತರು ತಮ್ಮದಲ್ಲದ ತಪ್ಪಿಗೆ ಸಾಕಷ್ಟು ನೋವನ್ನು ಅನುಭವಿಸಿದ್ದಾರೆ. ಹೀಗಾಗಿ ರೈತರ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಸಲುವಾಗಿ ಶತಮಾನಗಳ ನಂತರ ಭೂ ಮರು ಸರ್ವೆ ಪ್ರಾಯೋಗಿಕ ಪರೀಕ್ಷೆಗೆ ಇಂದು ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.