ಕಡಿಮೆ ಅಂಕ

ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ, ಮನನೊಂದು 21 ವರ್ಷದ ಯುವಕ ಆತ್ಮಹತ್ಯೆ
ಇತ್ತೀಚಿಗೆ ಪ್ರಕಟಗೊಂಡ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದರಿಂದ ಮನನೊಂದ 21 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡು ಬಾರಿಯೂ ನೀಟ್ ಪರೀಕ್ಷೆಯಲ್ಲಿ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಬಿಹಾರದ ಸಮಸ್ತಿಪುರ್ ಜಿಲ್ಲೆಯ ನಿವಾಸಿ ರೋಷನ್ (21) ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಉಡುಪಿ: ಕಡಿಮೆ ಅಂಕ ಬಂದಿದ್ದಕ್ಕೆ ಫೈನ್ ಹಾಕುವ ಬೆದರಿಕೆ; ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಬಗ್ಗೆ ಮಾನಸಿಕವಾಗಿ ನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರ್ಡೂರು ಎಂಬಲ್ಲಿ ನಡೆದಿದೆ.

ಬೆಂಗಳೂರು: ಸಿಇಟಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ
ಸಿಇಟಿ ಪರೀಕ್ಷೆಯಲ್ಲಿ ನಿರೀಕ್ಷಿಸಿದಷ್ಟು ಉತ್ತಮ ಅಂಕ ಗಳಿಸಲಿಲ್ಲ ಎಂಬ ಕಾರಣಕ್ಕೆ 18 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.

