ರಾಜ್ಯನಾನೇ ಕ್ಷೇತ್ರಕ್ಕೆ ಬರುತ್ತೇನೆ ಬೆಂಗಳೂರಿಗೆ ಬರಬೇಡಿ: ಕನಕಪುರ ಕ್ಷೇತ್ರದ ಅಭಿಮಾನಿಗಳಿಗೆ ಡಿಕೆ.ಶಿವಕುಮಾರ್ ಮನವಿ
ನಾನೇ ಕನಕಪುರಕ್ಕೆ ಬಂದು ನಿಮಗೆ ಕೃತಜ್ಞತೆ ಸಲ್ಲಿಸಿ ಅಭಿನಂದನೆ ಸ್ವೀಕರಿಸುತ್ತೇನೆ. ನೀವ್ಯಾರೂ ಬೆಂಗಳೂರಿಗೆ ಬರುವ ತೊಂದರೆ ತೆಗೆದುಕೊಳ್ಳದಿರಿ ಎಂದು ಕನಕಪುರ ಕ್ಷೇತ್ರದ ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿಕೊಂಡಿದ್ದಾರೆ.