ಕನಿಷ್ಠ ಬೆಂಬಲ ಬೆಲೆ

ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಬೀದಿಗಿಳಿದ ರೈತ ಸಂಘಟನೆಗಳು; ಮೇ.27ರಂದು ಮುಷ್ಕರಕ್ಕೆ ಕರೆ
ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ CACP, ಖಾರೀಫ್ ಮತ್ತು ರಬಿ ಹಂಗಾಮಿನ ಅಧಿಸೂಚಿತ ಬೆಳೆಗಳಿಗೆ MSP ಶಿಫಾರಸು ಮಾಡುವ ತಜ್ಞ ಸಲಹಾ ಸಂಸ್ಥೆಯಾಗಿದೆ.

ಕಬ್ಬು ಬೆಳೆಗಾರರ ಹೋರಾಟ 8ನೇ ದಿನಕ್ಕೆ: ಸರ್ಕಾರಕ್ಕೆ ಡೆಡ್ ಲೈನ್; ಸಚಿವ ಪಾಟೀಲ್ ಸಂಧಾನ ಸಭೆ ವಿಫಲ; Video
ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ನಿಗದಿಮಾಡಬೇಕೆಂದು ಪಟ್ಟು ಹಿಡಿದಿರುವ ಕಬ್ಬು ಬೆಳೆಗಾರರು, ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದು, ಇಂದು 8 ನೇ ದಿನಕ್ಕೆ ಕಾಲಿಟ್ಟಿದೆ.

MSP ಕೇಂದ್ರಗಳನ್ನು ನಿಗದಿತ ಸಮಯ ಮೀರಿ ತೆರೆದಿರಬೇಕು: ಹೈಕೋರ್ಟ್
ಅಸ್ತಿತ್ವದಲ್ಲಿರುವ ಖರೀದಿ ಕೇಂದ್ರಗಳು ಸಾಕಷ್ಟಿಲ್ಲ ಎಂದು ಕಂಡುಬಂದರೆ, ಖರೀದಿ ಅವಧಿಯೊಳಗೆ ಸಾಕಷ್ಟು ಹೆಚ್ಚುವರಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆಯೆ ಎಂದು ಜಿಲ್ಲಾಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ರೈತರ ಪ್ರತಿಭಟನೆ: ಕೇಂದ್ರದಿಂದ ನೋಡಲ್ ಅಧಿಕಾರಿ ನೇಮಕ; ಕನಿಷ್ಠ ಬೆಂಬಲ ಬೆಲೆ ಕುರಿತು ದಲ್ಲೆವಾಲ್ ಅರ್ಜಿ ಇಂದು ಸುಪ್ರೀಂ ಕೋರ್ಟ್ ವಿಚಾರಣೆ
ರಾಷ್ಟ್ರೀಯ ಸ್ವಯಂ ಸೇವಕ(RSS) ಸಂಘಕ್ಕೆ ಹತ್ತಿರವಿರುವ ರೈತ ಸಂಘಟನೆಗಳು, ಪ್ರತಿಭಟನೆ ಇತರ ರಾಜ್ಯಗಳಿಗೆ ಹರಡದಂತೆ ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಒತ್ತಾಯಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

MSP ಗೆ ಕಾನೂನು ಖಾತರಿ ನೀಡುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಕುರುಬೂರು ಶಾಂತಕುಮಾರ್ ಒತ್ತಾಯ
ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಕೃಷಿ ಉತ್ಪನ್ನಗಳನ್ನು ಖರೀದಿಸಲು ರಾಜ್ಯ ಸರ್ಕಾರಗಳಿಗೆ ಕೇಂದ್ರದ ಅನುದಾನವನ್ನು ಹೆಚ್ಚಿಸುವಲ್ಲಿ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸಕಾರಾತ್ಮಕ ಪಾತ್ರ ವಹಿಸಬೇಕು ಮತ್ತು ಈ ಪ್ರಕ್ರಿಯೆಗೆ ಕಾನೂನು ಖಾತರಿ ನೀಡಲು ಕಾನೂನನ್ನು ಅಂಗೀಕರಿಸಬೇಕು ಎಂದು ರಾಜ್ಯ ರೈತ ಸಂಘಗಳ ಒಕ್ಕೂಟವು ಒತ್ತಾಯಿಸಿದೆ.

3 ನೇ ದಿನಕ್ಕೆ ಕಾಲಿಟ್ಟ ರೈತರ ದೆಹಲಿ ಚಲೋ ಪ್ರತಿಭಟನೆ
ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ಗಮನ ಸೆಳಯಲು ರೈತರು ಹಮ್ಮಿಕೊಂಡಿರುವ ದೆಹಲಿ ಚಲೋ ಪ್ರತಿಭಟನೆ ಗುರುವಾರ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಕಾಂಗ್ರೆಸ್ ಮಿತ್ರಕೂಟ ಅಧಿಕಾರಕ್ಕೆ ಬಂದರೆ 'MSP ಗ್ಯಾರಂಟಿ': ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ರಾಹುಲ್ ಗಾಂಧಿ ಘೋಷಣೆ
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಬೆಳೆ ಬೆಂಬಲ ಬೆಲೆಗೆ ಆಗ್ರಹಿಸಿ ಮತ್ತೆ ರೈತರು ಬೃಹತ್ ಪ್ರತಿಭಟನೆಗೆ ಮುಂದಾಗಿರುವಂತೆಯೇ ಇತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನೇತೃತ್ವದ INDI ಮಿತ್ರಕೂಟ ಅಧಿಕಾರಕ್ಕೆ ಬಂದರೆ ರೈತರಿಗೆ ಬೆಂಬಲ ಬೆಲೆ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್: ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಅಸ್ತು
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ ಬುಧವಾರ ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಏರಿಕೆ ಮಾಡಲು ಅನುಮತಿ ನೀಡಿದೆ. ಇನ್ನೂ ಮಳೆಗಾಲ ಆರಂಭವಾಗಬೇಕಿದೆ.

ಅನ್ನದಾತರಿಗೆ ಕೇಂದ್ರ ಸರ್ಕಾರದ ಉಡುಗೊರೆ; ಗೋಧಿ, ಸಾಸಿವೆಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ
ಉತ್ಪಾದನೆ ಮತ್ತು ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಮಂಗಳವಾರ ಕೇಂದ್ರ ಸರ್ಕಾರ ಪ್ರಸಕ್ತ ಬೆಳೆ ವರ್ಷದಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಯನ್ನು ಗೋಧಿ ಕ್ವಿಂಟಾಲ್‌ಗೆ 110 ರೂ. ಮತ್ತು ಸಾಸಿವೆಗೆ ಕ್ವಿಂಟಾಲ್‌ಗೆ 400 ರೂ.ಗಳನ್ನು ಮಂಗಳವಾರ ಹೆಚ್ಚಿಸಿದೆ.

