ಕನ್ನಡ ನಟ

ನಟ ದೇವರಾಜ್ 2ನೇ ಪುತ್ರ ಪ್ರಣಮ್ ನಿಶ್ಚಿತಾರ್ಥ
ಡೈನಮಿಕ್ ಸ್ಟಾರ್ ದೇವರಾಜ್ ಅವರ ಎರಡನೇ ಪುತ್ರ ನಟ ಪ್ರಣಮ್ ದೇವರಾಜ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ಸರಳ ಕಾರ್ಯಕ್ರಮ ನಡೆಯಿತು.

ಬಾರ್‌ನಲ್ಲಿ ಗಲಾಟೆ: ನಟ ದರ್ಶನ್ ಜೊತೆ ಅಭಿನಯಿಸಿದ್ದ ನಿರಂಜನ್ ಮೇಲೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ!
ನಟ ದರ್ಶನ್ ಅಭಿನಯದ ಒಡೆಯ ಚಿತ್ರದಲ್ಲಿ ಅಭಿನಯಿಸಿದ್ದ ನಟ ನಿರಂಜನ್ ಮೇಲೆ ಬಾರ್‌ನಲ್ಲಿ ನಡೆದ ಗಲಾಟೆಯಲ್ಲಿ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ. ಘಟನೆ ಮಾರ್ಚ್ 28ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕೆಜಿಎಫ್ 'ಚಾಚಾ' ಖ್ಯಾತಿಯ ಹರೀಶ್ ರಾಯ್ ನಿಧನ: ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ
ಹರೀಶ್ ರಾಯ್ ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹರೀಶ್ ರಾಯ್ ಚಿಕಿತ್ಸೆಗೆ ಕೆಜಿಎಫ್ ಸಿನಿಮಾ ಹೀರೋ ಯಶ್ ಸೇರಿದಂತೆ ಅನೇಕರು ಆರ್ಥಿಕ ಸಹಾಯ ಹಸ್ತ ಚಾಚಿದ್ದರು.

ಧಾರವಾಡ ರಂಗಾಯಣ ನಿರ್ದೇಶಕ, ಹಾಸ್ಯ ಚಿತ್ರನಟ ರಾಜು ತಾಳಿಕೋಟಿ ನಿಧನ
ಹಿರಿಯ ರಂಗಭೂಮಿ ಕಲಾವಿದ ಮತ್ತು ಹಾಸ್ಯನಟ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯಪುರದ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದರು.

'ಬಾ ನಲ್ಲೆ ಮಧುಚಂದ್ರಕೆ' ಸಿನಿಮಾ ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ವಿಧಿವಶ
ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು, ಐಎಎಸ್ ಅಧಿಕಾರಿಯಾಗಿದ್ದ, ಬಿಜೆಪಿ ಮುಖಂಡ, ನಟ ಕೆ ಶಿವರಾಮ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.

ದುಬೈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಆಮೀಷ: ಕನ್ನಡ ಕಿರುತೆರೆಯ ಹಿರಿಯ ನಟನಿಗೆ ದಂಪತಿಯಿಂದ ವಂಚನೆ!
65 ವರ್ಷದ ಜನಪ್ರಿಯ ಕನ್ನಡ ಚಲನಚಿತ್ರ ಮತ್ತು ಟಿವಿ ಧಾರಾವಾಹಿ ನಟ-ಕಮ್-ನಿರ್ದೇಶಕ ಪಿ ರವಿಕಿರಣ್ ಅವರಿಗೆ ದಂಪತಿ ಮತ್ತು ಅವರ ಸಹಚರರು 4 ಲಕ್ಷಕ್ಕೂ ಹೆಚ್ಚು ರೂ. ಹಣ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಸದ್ದಿಲ್ಲದೆ ಸರಳವಾಗಿ ನಿಶ್ಟಿತಾರ್ಥ ಮಾಡಿಕೊಂಡ 'ಒಳ್ಳೆ ಹುಡ್ಗ' ಪ್ರಥಮ್
ಕನ್ನಡ ಬಿಗ್ ಬಾಸ್ ಸೀಸನ್ 4ರ ವಿಜೇತ, ನಟ ಒಳ್ಳೆ ಹುಡ್ಗ ಪ್ರಥಮ್ ಸದ್ದು-ಗದ್ದಲವಿಲ್ಲದೆ, ಆಡಂಭರಗಳಿಲ್ಲದೆ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಾವು ನಿಶ್ಚಿತಾರ್ಥ ಮಾಡಿಕೊಂಡಿರುವ ವಿಚಾರವನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.

ಕನ್ನಡ ನಟ-ನಿರ್ದೇಶಕ 'ಟಪೋರಿ ಸತ್ಯ' ಅನಾರೋಗ್ಯದಿಂದ ನಿಧನ
ಸ್ಯಾಂಡಲ್ ವುಡ್ ನಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ, ಸಿನಿಮಾ ನಿರ್ದೇಶಕನಾಗಿಯೂ ಗುರುತಿಸಿಕೊಂಡಿದ್ದ ಟಪೋರಿ ಸತ್ಯ (46) ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ರಾಯರಿಂದ ಈ ತಿರುಕನ ಕನಸು ನನಸಾಗಿದೆ: ಗುರುವೈಭವೋತ್ಸವ ಪ್ರಶಸ್ತಿ ಸ್ವೀಕರಿಸಿದ ಬಳಿಕ ಜಗ್ಗೆಶ್ ಮಾತು!
ಶ್ರಮಜೀವಿಗಳಿಗೆ, ಜೀವನ ಅರ್ಥಮಾಡಿಕೊಂಡವರಿಗೆ ರಾಯರು ಎಲ್ಲವನ್ನು ಕೊಡುತ್ತಾರೆ. ಎಂಎಲ್‌ಸಿ ಆಗಬೇಕು ಅಂತ ಕೇಳಿಕೊಂಡಿದ್ದೆ. ಆದರೆ ರಾಜ್ಯಸಭಾ ಸದಸ್ಯ ಸ್ಥಾನ ರಾಯರು ಕೊಟ್ಟಿದ್ದಾರೆ ಎಂದು ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಹೇಳಿದ್ದಾರೆ.

