ರಾಜ್ಯ6 ನಿರ್ಣಯಗಳೊಂದಿಗೆ ಕಲಬುರಗಿ ನುಡಿಜಾತ್ರೆಗೆ ಅದ್ದೂರಿ ತೆರೆ
ಕಲಬುರಗಿಯಲ್ಲಿ ಕಳೆದ ಮೂರು ದಿನಗಳಿಂದ ನಡೆದಿದ್ದ ಎಂಬತ್ತೈದನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರ ಅದ್ದೂರಿ ತೆರೆ ಬಿದ್ದಿದೆ. ಸಮ್ಮೇಳನ ಕೊನೆಯ ದಿನವಾದ ಇಂದು ಆರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಈ ನಿರ್ಣಯ ಅಂಗೀಕಾರವಾಗಿದೆ.