ರಾಜ್ಯಮರಾಠ ಸಮುದಾಯ ನಿಗಮ ಸ್ಥಾಪನೆ: ಡಿ.5 ಬಂದ್ ಕರೆಗೆ ಕನ್ನಡ ಸಂಘಟನೆಗಳ ಬೆಂಬಲ ಅಚಲ!
ರಾಜ್ಯ ಸರ್ಕಾರದ ಮರಾಠ ಸಮುದಾಯ ನಿಗಮ ಸ್ಥಾಪನೆ ಕ್ರಮ ವಿರೋಧಿಸಿ ಡಿ.5ರಂದು ಕರೆ ನೀಡಿದ್ದ ರಾಜ್ಯ ಬಂದ್'ಗೆ ಕರ್ನಾಟಕ ರಕ್ಷಣಾ ವೇದಿಕೆ ಸೇರಿ ಬಹುತೇಕ ಎಲ್ಲಾ ಕನ್ನಡಪರ ಸಂಘಟನೆಗಳೂ ಒಗ್ಗಟ್ಟಾಗಿ ಬೆಂಬಲ ವ್ಯಕ್ತಪಡಿಸಿವೆ. ಹೀಗಾಗಿ ರಾಜ್ಯ ಬಂದ್ ಖಚಿತ ಎಂದು ಒಕ್ಕೊರಲಿನಿಂದ ಘೋಷಿಸಿವೆ.