ರಾಜ್ಯಕನ್ನಡ ವಿಶ್ವವಿದ್ಯಾಲಯ ರಕ್ಷಿಸಿ: ಬರಗೂರು
ಕನ್ನಡ ವಿಶ್ವವಿದ್ಯಾಲಯದ ವಿವಾದಿತ ಸಮಸ್ಯೆಗಳನ್ನು ಪರಿಹರಿಸಿ, ವಿವಿಯನ್ನು ಕೂಡಲೇ ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕು ಎಂದು ಬಂಡಾಯ ಸಾಹಿತ್ಯ ಸಂಘಟನೆ-ಕರ್ನಾಟಕದ ವತಿಯಿಂದ ಬರಹಗಾರ ಬರಗೂರು ರಾಮಚಂದ್ರಪ್ಪ ಅವರು ಮುಖ್ಯಮಂತ್ರಿಗೆ ಹಾಗೂ ಉನ್ನತ ಶಿಕ್ಷಣ ಶಿಕ್ಷಣ ಸಚಿವರಿಗೆ ಶನಿವಾರ ಪತ್ರ ಬರೆದಿದ್ದಾರೆ.