ಕರ್ನಾಟಕ ಉಪ ಚುನಾವಣೆ ಫಲಿತಾಂಶ

ನಾನು ಸೋತಿದ್ದೇನೆ: ಸಿಎಲ್‌ಪಿ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ
15 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನ ನೀಡಿದ್ದು ಕೇವಲ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರಿಂದ ಸೋಲಿನ ಹೊಣೆ ಹೊತ್ತು ಕರ್ನಾಟಕ ಶಾಸಕಾಂಗ ಪಕ್ಷದ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ರಾಜಿನಾಮೆ ಪರ್ವ: ಸಿದ್ದರಾಮಯ್ಯ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜಿನಾಮೆ!
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ನೀಡಿದ್ದ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜಿನಾಮೆ ನೀಡಿದ್ದಾರೆ.

ಗೆಲುವಿನ ಸಂಭ್ರಮಾಚರಣೆ ವೇಳೆ ಶರತ್ ಬಚ್ಚೇಗೌಡ ಬೆಂಬಲಿಗ ಹೃದಯಾಘಾತದಿಂದ ಸಾವು
15 ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರು ಗೆಲುವು ಸಾಧಿಸಿದ್ದು, ಗೆಲುವಿನ ಸಂಭ್ರಮಾಚರಣೆ ವೇಳೆ ಶರತ್ ಬೆಂಬಲಿಗರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕಾಂಗ್ರೆಸ್ ಹೀನಾಯ ಸೋಲು: ಸೋಲಿನ ಹೊಣೆ ಹೊತ್ತು ವಿಪಕ್ಷ ಸ್ಥಾನಕ್ಕೆ ಸಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ರಾಜಿನಾಮೆ ನಿರ್ಧಾರ
15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಈ ಹಿನ್ನೆಲೆಯಲ್ಲಿ ಸೋಲಿನ ಹೊಣೆ ಹೊತ್ತು ವಿಪಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಮಂಡ್ಯ ಬಿಜೆಪಿ ಅಭ್ಯರ್ಥಿಗೆ ಗಣನೀಯ ಮತ ಚಲಾವಣೆ: ಹಳೇ ಮೈಸೂರು ಭಾಗದಲ್ಲಿ ಕಮಲ ಅರಳುವ ಸೂಚನೆ!
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಪರಾಭವಗೊಂಡಿದೆ. ಆದರೆ ಪಕ್ಷದ ಅಭ್ಯರ್ಥಿ ಹಿಂದೆಂದಿಗಿಂತಲೂ ಅಧಿಕ ಮತ ಪಡೆದಿದ್ದು, ಜೆಡಿಎಸ್ -ಕಾಂಗ್ರೆಸ್ ಪ್ರಾಬಲ್ಯವಿರುವ ಹಳೇ .,..

