ಕರ್ನಾಟಕ ಬಜೆಟ್ 2023

ಬಿಜೆಪಿಗೆ ನಾಗರಿಕತೆ ಇಲ್ಲ; ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ: ಸದನದಲ್ಲಿ ಬಿಜೆಪಿ ಶಾಸಕರ ನಡವಳಿಕೆ ಬಗ್ಗೆ ಸಿಎಂ ಗರಂ
ನೆನ್ನೆ ವಿಧಾನಸಭೆಯಲ್ಲಿ ನಡೆದ ಗದ್ದಲ, ಬಿಜೆಪಿ ಶಾಸಕರ ನಡವಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಜೆಟ್ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಪರವಾಗಿದೆ: ಸಚಿವ ಜಮೀರ್ ಅಹ್ಮದ್ ಖಾನ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2023-24ನೇ ಸಾಲಿನ ಬಜೆಟ್ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಮಂತ್ರವನ್ನು ಆಧರಿಸಿದ 'ಅಭಿವೃದ್ಧಿ ಆಧಾರಿತ' ಬಜೆಟ್ ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ಹಲವು ಸಂಕಷ್ಟಗಳ ನಡುವೆ ವಿವೇಚನೆಯ ಬಜೆಟ್ ಮಂಡನೆ: ಕುಶಲತೆಯಿಂದ ಆಯವ್ಯಯ ಮಂಡಿಸಿದ ಸಿಎಂ ಸಿದ್ದರಾಮಯ್ಯ
ನೂತನ ಕಾಂಗ್ರೆಸ್ ಸರ್ಕಾರದ ಈ ವರ್ಷದ ಬಜೆಟ್ ಕೆಲವು ಕುತೂಹಲಕಾರಿ ನಿರೀಕ್ಷೆಗಳನ್ನು ಆರಂಭದಲ್ಲಿಯೇ ಸೃಷ್ಟಿಸಿತ್ತು. ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವಲ್ಲಿ ಎದುರಿಸಬಹುದಾದ ಹಣಕಾಸಿನ ತೊಂದರೆಗಳ ಬಗ್ಗೆ ಪ್ರತಿಪಕ್ಷಗಳು ತೀವ್ರ ಗದ್ದಲವೆಬ್ಬಿಸಿದ್ದವು.

ಕರ್ನಾಟಕ ಬಜೆಟ್ 2023: ರಾಜಧಾನಿ ಬೆಂಗಳೂರಿಗೆ ಘೋಷಿಸಿದ್ದೇನು?
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಿದ್ದು ಅದರಲ್ಲಿ ನಮ್ಮ ಮೆಟ್ರೊ ಮತ್ತು ಉಪನಗರ ರೈಲ್ವೆ ಯೋಜನೆ ಸೇರಿದಂತೆ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಕನಿಷ್ಠ ಐದು ವರ್ಷಗಳು ಬೇಕಾಗುತ್ತದೆ ಎಂಬುದನ್ನು ಗುರುತಿಸಿದ್ದಾರೆ.

ಕರ್ನಾಟಕ ಬಜೆಟ್ 2023: 'ಇದೊಂದು ಕೆಟ್ಟ ಯೋಜನೆ'; ಮೇಕೆದಾಟು ಯೋಜನೆಗೆ ನಟ ಚೇತನ್ ವಿರೋಧ
ಕರ್ನಾಟಕ ಸರ್ಕಾರದ ಉದ್ದೇಶಿದ ಮೇಕೆದಾಟು ಯೋಜನೆಗೆ ನಟ-ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಅಹಿಂಸಾ ವಿರೋಧ ವ್ಯಕ್ತಪಡಿಸಿದ್ದು, ಇದೊಂದು ಕೆಟ್ಟ ಯೋಜನೆ ಎಂದು ಟೀಕಿಸಿದ್ದಾರೆ.

ಸಿದ್ದು ಬಜೆಟ್ ಮಂಡನೆ ವೇಳೆ ಸದನದಲ್ಲಿ ಶಾಸಕರ ಜಾಗದಲ್ಲಿ 15 ನಿಮಿಷ ಕೂತಿದ್ದ ವ್ಯಕ್ತಿ ಬಂಧನ: ಪೊಲೀಸರಿಂದ ವಿಚಾರಣೆ
ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುವ ವೇಳೆ ಭದ್ರತಾ ಲೋಪವಾಗಿದ್ದು, ಸದನದಲ್ಲಿ ಶಾಸಕರ ಜಾಗದಲ್ಲಿ 15 ನಿಮಿಷ ಕೂತಿದ್ದ ವ್ಯಕ್ತಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ತರಾಟೆ; ಆರ್ಥಿಕತೆ ಹದಗೆಡಲು ಹಿಂದಿನ ಬಿಜೆಪಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ
'ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡರು ಮತ್ತು ರಾಜ್ಯದ ಆರ್ಥಿಕತೆಯು 'ಹದಗೆಡಲು' ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದು ದೂರಿದರು.

ದಾಖಲೆಯ 14ನೇ ಬಜೆಟ್ ಮಂಡನೆ: ಐದು ಚುನಾವಣಾ ಭರವಸೆಗಳಿಗೆ 52,000 ಕೋಟಿ ರೂ. ವೆಚ್ಚ- ಸಿದ್ದರಾಮಯ್ಯ
ನಮ್ಮ ಸರ್ಕಾರದ ಐದು ಪ್ರಮುಖ ಚುನಾವಣಾ 'ಖಾತರಿ'ಗಳಿಗಾಗಿ ವಾರ್ಷಿಕವಾಗಿ ಅಂದಾಜು 52,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುವುದು ಮತ್ತು 1.3 ಕೋಟಿ ಕುಟುಂಬಗಳಿಗೆ ಇದರಿಂದ ಪ್ರಯೋಜನವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಬಜೆಟ್ 2023: ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬಡ್ಡಿರಹಿತ ಸಾಲದ ಮಿತಿ 3 ಲಕ್ಷ ರೂ.ಗೆ ಹೆಚ್ಚಳ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸುತ್ತಿದ್ದು, ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ.ಗಳಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

