ರಾಜ್ಯಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ನಾಮನಿರ್ದೇಶನ ವಾಪಸ್: ಸರ್ಕಾರದ ಕ್ರಮವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಹುದ್ದೆಗೆ ನೇಮಿಸಲಾಗಿದ್ದ ಮಾಜಿ ಎಂಎಲ್ಸಿ ಅಬ್ದುಲ್ ಅಜೀಂ ಅವರ ನಾಮನಿರ್ದೇಶನ ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದ್ದು, ಸರ್ಕಾರದ ನಡೆಯನ್ನು ಪ್ರಶ್ನಿಸಿ ಅಬ್ದುಲ್ ಅಜೀಂ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.