ಕರ್ನಾಟಕ ವಿಥಾನಸಭೆ ಚುನಾವಣೆ 2018

218 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!
ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೊನೆಗೂ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಒಟ್ಟು 224 ಕ್ಷೇತ್ರಗಳ ಪೈಕಿ 218 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಶಾಂತಿನಗರ ಸೇರಿ 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡದ ಕಾಂಗ್ರೆಸ್
ಬಹುತೇಕ ಎಲ್ಲ ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆಯಾದರೂ, ಬೆಂಗಳೂರಿನ ಶಾಂತಿನಗರ ಸೇರಿದಂತೆ ಒಟ್ಟು 5 ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ಇನ್ನೂ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ.

ಚಾಮುಂಡೇಶ್ವರಿಯಿಂದ ಮಾತ್ರ ಸಿಎಂ ಸಿದ್ದರಾಮಯ್ಯ ಸ್ಪರ್ಧೆ!
ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಬಿಡುಗಡೆ ಮಾಡಿದ್ದು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರವೊಂದರಲ್ಲಿ ಮಾತ್ರ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿದ್ದಾರೆ.

ಕೈ ಟಿಕೆಟ್ ಕಸರತ್ತು: 16 ಹಾಲಿ ಶಾಸಕರಿಗೆ ಟಿಕೆಟ್ ಇಲ್ಲ, ಬಿಬಿಎಂಪಿ ಮಾಜಿ ಮೇಯರ್ ಗಳು ಕಣಕ್ಕೆ
ಭಾನುವಾರ ರಾತ್ರಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ 218 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯಲ್ಲಿ 16 ಹಾಲಿ ಶಾಸಕರು ಟಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿದುಬಂದಿದೆ.

ಕೈ ಟಿಕೆಟ್ ಜಟಾಪಟಿ: ಹೈ ಕಮಾಂಡ್ ಸಂಧಾನ ಸೂತ್ರಕ್ಕೆ ಸೈ ಎಂದ ಸಿಎಂ ಸಿದ್ದು ಅಂಡ್ ಖರ್ಗೆ ಟೀಂ
ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ವಿಚಾರವಾಗಿ ಕಾಂಗ್ರೆಸ್ನಲ್ಲಿ ಭುಗಿಲೆದ್ದಿದ್ದ ಅಗ್ರ ನಾಯಕರ ನಡುವಿನ ಪ್ರತಿಷ್ಠೆಯ ಗುದ್ದಾಟಕ್ಕೆ ಕೊನೆಗೂ ತೆರೆಬಿದ್ದಿದೆ.

ಜೆಡಿಎಸ್ ರೆಬೆಲ್ ಶಾಸಕರಿಗೆ ಕೈ ಟಿಕೆಟ್, ದಾವಣಗೆರೆ ದಕ್ಷಿಣದಲ್ಲಿ ಶ್ಯಾಮನೂರು ಶಿವಶಂಕರಪ್ಪಗೆ ಟಿಕೆಟ್
ನಿರೀಕ್ಷೆಯಂತೆಯೇ ಜೆಡಿಎಸ್ ಪಕ್ಷದ ರೆಬೆಲ್ ಶಾಸಕರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಘೋಷಣೆ ಮಾಡಿದ್ದು, ದಾವಣಗೆರೆ ದಕ್ಷಿಣದಲ್ಲಿ ಶ್ಯಾಮನೂರು ಶಿವಶಂಕರಪ್ಪ ಅವರು ಟಿಕೆಟ್ ಪಡೆದಿದ್ದಾರೆ.

