ರಾಜ್ಯWeather Forecast: ನಾಳೆ, ನಾಡಿದ್ದು ಬೆಂಗಳೂರಿನಲ್ಲಿ ಮಳೆ; ಬಿಸಿಲಿನ ಬೇಗೆಗೆ ತಂಪೆರೆವ ಸೂಚನೆ
ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಝಳ ಏರುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮಾರ್ಚ್ 21 ಮತ್ತು 22 ರಂದು ಲಘು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಮಳೆಯಿಂದಾಗಿ ನಗರದಲ್ಲಿ ತಾಪಮಾನಕ್ಕೆ ಕೊಂಚ ಬ್ರೇಕ್ ಬೀಳಲಿದ್ದು, ಹೆಚ್ಚುತ್ತಿರುವ ತಾಪಮಾನ ಮತ್ತು ನೀರಿನ ಕೊರತೆಯಿಂದ ಬಳಲುತ್ತಿರುವ ನಿವಾಸಿಗಳಿಗೆ ರಿಲೀಫ್ ತರಲಿದೆ.