ರಾಜ್ಯ'ಕೇಂದ್ರಕ್ಕಿಂತ ನಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿದೆ, ಈ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧ': ಸಿಎಂ ಸಿದ್ದರಾಮಯ್ಯ
ಕಳೆದ ತಿಂಗಳಷ್ಟೇ ಈ ಆರ್ಥಿಕ ವರ್ಷದ ಆಯವ್ಯಯಪತ್ರವನ್ನು ನಾನು ಮಂಡಿಸಿದ್ದೇನೆ, ಅದು ಅಂಕಿ-ಅಂಶಗಳ ಕಾಗದದ ಕಂತೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಒಪ್ಪಿಸಿರುವ ಪ್ರಾಮಾಣಿಕ ಲೆಕ್ಕಪತ್ರ. ಆ ಆಯವ್ಯಯವನ್ನು ವಿಧಾನಮಂಡಲದ ಉಭಯ ಸದನಗಳು ಒಪ್ಪಿಕೊಂಡು ಅಂಗೀಕರಿಸಿವೆ ಎಂದು ಹೇಳಿದ್ದಾರೆ.