ರಾಜ್ಯರಾಜ್ಯದಲ್ಲಿ ಕೊರೋನಾ ಸ್ಫೋಟ: ಸಂಜೆ 4 ಗಂಟೆಗೆ ಸಿಎಂ ಬೊಮ್ಮಾಯಿ ಸಭೆ, ವಿಡಿಯೊ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳು ಭಾಗಿ
ರೂಪಾಂತರಿ ಕೊರೋನಾ ವೈರಸ್ ಹಲವು ದೇಶಗಳಲ್ಲಿ ಕಾಣಿಸಿಕೊಂಡು ಹಬ್ಬುವ ಸಾಧ್ಯತೆಯಿರುವುದರಿಂದ ಹಾಗೂ ರಾಜ್ಯದ ಅನೇಕ ಕಡೆಗಳಲ್ಲಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗಿ ವಕ್ಕರಿಸಿರುವ ಹಿನ್ನೆಲೆಯಲ್ಲಿ ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳು, ತಜ್ಞರ ಸಭೆ ಕರೆದಿದ್ದಾರೆ.