ರಾಜ್ಯಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೂವರ ಸಾವು: ಜಲ ಜೀವನ್ ಮಿಷನ್ ಪೈಪ್ಲೈನ್ ಕಾಮಗಾರಿಗೆ ಗ್ರಾಮಸ್ಥರ ಆರೋಪ
ಜಿಲ್ಲೆಯ ಬಸರಿಹಾಳ್ ಮತ್ತು ಬಿಚ್ಚಲ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 19 ತಿಂಗಳ ಮಗು ಹಾಗೂ 10 ವರ್ಷದ ಬಾಲಕಿ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಬಸರಿಹಾಳ್ ಗ್ರಾಮದ ಹೊನ್ನಮ್ಮ ಶಿವಪ್ಪ (65ವ) ಎಂಬ ವೃದ್ಧೆ ಮೃತಪಟ್ಟಿದ್ದು, ಕಳೆದ ನಾಲ್ಕು ದಿನಗಳಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟವರ ಸಂಖ್ಯೆ 3ಕ್ಕೇರಿದೆ.