ರಾಜ್ಯಕಾಮೇಗೌಡರನ್ನು ಮಂಡ್ಯ ವೈದ್ಯಕೀಯ ಕಾಲೇಜಿಗೆ ದಾಖಲಿಸಿಕೊಳ್ಳುವಂತೆ ಸೂಚನೆ: ಸಚಿವ ಕೆ.ಸುಧಾಕರ್
ಕೋವಿಡ್–19 ಸೋಂಕಿಗೆ ತುತ್ತಾಗಿರುವ ಕಲ್ಮನೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾದ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾದ ಬೆನ್ನಲ್ಲೇ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಕಾಮೇಗೌಡರನ್ನು ಮಂಡ್ಯ ವೈದ್ಯಕೀಯ ಕಾಲೇಜಿಗೆ ದಾಖಲಿಸಿಕೊಳ್ಳುವಂತೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.