ರಾಜ್ಯಕಾಂಗ್ರೆಸ್ ಗ್ಯಾರಂಟಿ: ಯುವ ನಿಧಿ, ಅನ್ನಭಾಗ್ಯ ಯೋಜನೆಗಳ ಮಾರ್ಗಸೂಚಿ ಪ್ರಕಟ
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿನ ಐದು ಗ್ಯಾರಂಟಿಗಳ ಪೈಕಿ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಮತ್ತು ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ ತಲಾ 10 ಕೆಜಿ ಅಕ್ಕಿಯನ್ನು ವಿತರಿಸಲು ಶನಿವಾರ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.